Mahadevappa doesn't even have the courtesy to talk about etiquette: Pratap Simha
ಮೈಸೂರು: ರಾಜ್ಯ ಸರ್ಕಾರದ ಜಾತಿ ಗಣತಿ ಸಮೀಕ್ಷಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹಿಂದೂ ಸಮಾಜದ ಜಾತಿಗಳನ್ನು ಬಿಡಿ ಬಿಡಿಯಾಗಿ ಒಡೆದು ಅನ್ಯ ಧರ್ಮದ ಸಂಖ್ಯೆ ಹೆಚ್ಚು ತೋರಿಸುವ ಹುನ್ನಾರ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆಯನ್ನು ಹೆಚ್ಚು ತೋರಿಸಲು ಪ್ರಯತ್ನ ಮಾಡಲಾಗುತ್ತಿದೆ. ಹಿಂದೂಗಳ ಜಾತಿಗಳನ್ನು ಒಡೆದು ರಾಜಕೀಯ ದುರುದ್ದೇಶಕ್ಕಾಗಿ ಜಾತಿಗಣತಿ ಸಮೀಕ್ಷೆ ನಡೆಸುತ್ತಿದ್ದಾರೆ. ಸಮಾಜದ ಸ್ವಾಮೀಜಿಗಳು ಈ ಬಗ್ಗೆ ಧ್ವನಿಯೆತ್ತಬೇಕು ಎಂದು ಹೇಳಿದರು.
ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಇಂತಹ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾನೂನು ಪದವೀಧರನಾಗಿ ಸಿಎಂ ಸಿದ್ದರಾಮಯ್ಯ ಇಂತಹ ಯತ್ನ ನಡೆಸಲು ಹೊರಟಿರುವುದು ತಪ್ಪು ಎಂಬ ಅರಿವು ಅವರಿಗೂ ಇದೆ. ಆದರೂ ರಾಜಕೀಯಕ್ಕಾಗಿ ಈ ದಾಳ ಉರುಳಿಸಿದ್ದಾರೆ. ಕುರ್ಚಿ ಭದ್ರಪಡಿಸಿಕೊಳ್ಳಲು ಸಿದ್ದರಾಮಯ್ಯ ಮಾಡುತ್ತಿರುವ ತಂತ್ರ ಇದು ಎಂದು ಕಿಡಿಕಾರಿದರು.
ಶ್ರೀ ಶ್ರೀ ಶ್ರೀ ಎಂದು ಹೆಸರಿಟ್ಟುಕೊಂಡಿರುವವರು ಈ ಬಗ್ಗೆ ಧ್ವನಿಯೆತ್ತಬೇಕು. ಹಿಂದೂ ಸಮಾಜವನ್ನು ಒಡೆದು ರಾಜಕೀಯ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯಗೆ ಮುಂದಾಗುವ ಅನಾಹುತಗಳ ಬಗ್ಗೆ ತಿಳಿಹೇಳಬೇಕು ಎಂದು ಒತ್ತಾಯಿಸಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…