Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಆಗಸ್ಟ್.‌9ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ

ಮೈಸೂರು: ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.‌9ಕ್ಕೆ ಕಾಂಗ್ರೆಸ್‌ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಅಂದು ನಡೆಯುವ ಸಮಾವೇಶದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 6 ಜಿಲ್ಲೆಯ ಜನರು ಇಲ್ಲಿ ಭಾಗಿಯಾಗಲಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಯಿಂದ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಪ್ರತಿ ಹಳ್ಳಿಗೂ 2 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಕಳುಹಿಸುವಂತೆ ಸೂಚನೆ ನೀಡಲಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್‌ ನಾಯಕರು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ಕುರಿತು ಭಾಷಣ ನಡೆಯಲಿದ್ದು, ಬಿಜೆಪಿ-ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆಯಿದೆ.

ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲಾ ಸಚಿವರು ಹಾಗೂ ಶಾಸಕರು ಭಾಗಿಯಾಗುವ ನಿರೀಕ್ಷೆಯಿದ್ದು, ಮೈಸೂರಿನಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ನಡೆಸಲಿದೆ.

 

 

Tags: