ಮೈಸೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.9ಕ್ಕೆ ಕಾಂಗ್ರೆಸ್ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಅಂದು ನಡೆಯುವ ಸಮಾವೇಶದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 6 ಜಿಲ್ಲೆಯ ಜನರು ಇಲ್ಲಿ ಭಾಗಿಯಾಗಲಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಯಿಂದ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಪ್ರತಿ ಹಳ್ಳಿಗೂ 2 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಕಳುಹಿಸುವಂತೆ ಸೂಚನೆ ನೀಡಲಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್ ನಾಯಕರು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.
ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ಕುರಿತು ಭಾಷಣ ನಡೆಯಲಿದ್ದು, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆಯಿದೆ.
ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು ಹಾಗೂ ಶಾಸಕರು ಭಾಗಿಯಾಗುವ ನಿರೀಕ್ಷೆಯಿದ್ದು, ಮೈಸೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಲಿದೆ.
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…
ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…
ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…