ಮೈಸೂರು ನಗರ

ಆಗಸ್ಟ್.‌9ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ

ಮೈಸೂರು: ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.‌9ಕ್ಕೆ ಕಾಂಗ್ರೆಸ್‌ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಅಂದು ನಡೆಯುವ ಸಮಾವೇಶದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 6 ಜಿಲ್ಲೆಯ ಜನರು ಇಲ್ಲಿ ಭಾಗಿಯಾಗಲಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಯಿಂದ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಪ್ರತಿ ಹಳ್ಳಿಗೂ 2 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಕಳುಹಿಸುವಂತೆ ಸೂಚನೆ ನೀಡಲಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್‌ ನಾಯಕರು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ಕುರಿತು ಭಾಷಣ ನಡೆಯಲಿದ್ದು, ಬಿಜೆಪಿ-ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆಯಿದೆ.

ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲಾ ಸಚಿವರು ಹಾಗೂ ಶಾಸಕರು ಭಾಗಿಯಾಗುವ ನಿರೀಕ್ಷೆಯಿದ್ದು, ಮೈಸೂರಿನಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ನಡೆಸಲಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಂತಾರ: ಚಾಪ್ಟರ್ 1’ಗೆ ಡಬಲ್ ಗೌರವ | ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ, ಚಿತ್ರಕ್ಕೆ ವಿಶೇಷ ಉಲ್ಲೇಖ

ಗೋವಾ: ಇಲ್ಲಿ ನಡೆದ 57ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ನಟ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದಿದ್ದಾರೆ.…

8 hours ago

ಮಹಿಳಾ ಮೀಸಲಾತಿ ಮಸೂದೆ ಇಂದಿನ ಅಗತ್ಯ | ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆ ಇಂದಿನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಮಹಿಳೆಯರಿಗೆ…

8 hours ago

140ನೇ ‘ಮನ್ ಕಿ ಬಾತ್’ | ಡ್ರಗ್ಸ್ ವಿರುದ್ಧ ಜಾಗೃತಿ, ಮೊಬೈಲ್ ಸುರಕ್ಷತೆಗೆ ಪ್ರಧಾನಿ ಮೋದಿ ಒತ್ತು

ನವದೆಹಲಿ: ಮೊಬೈಲ್ ಕಳೆದುಹೋದರೆ ಏನು ಮಾಡಬೇಕು? 140ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಸಂಚಾರ್ ಸಾಥಿ’ ಬಳಸುವಂತೆ…

9 hours ago

ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ | ಮಾಸಿಕ ಗೌರವಧನ ₹2,000 ಹೆಚ್ಚಳ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಧರಣಿಗೆ ತೆರೆ ಬಿದ್ದಿದೆ. ಮಾಸಿಕ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಿಸಲು ರಾಜ್ಯ…

10 hours ago

ಓದುಗರ ಪತ್ರ: ‘ಮಂತ್ರ ಮಾಂಗಲ್ಯ’ ಮದುವೆಗಳು ಹೆಚ್ಚಾಗಲಿ

ಕರ್ನಾಟಕ ವಿಧಾನಸಭೆಯ ಅತ್ಯಂತ ಕಿರಿಯ ಶಾಸಕ, ನಂಜನಗೂಡು ಮೀಸಲು ಕ್ಷೇತ್ರವನ್ನು ಪ್ರತಿನಿಧಿಸುವ ದರ್ಶನ್ ಧ್ರುವನಾರಾಯಣರ ಸರಳ ‘ಮಂತ್ರ ಮಾಂಗಲ್ಯ’ ಮದುವೆ…

12 hours ago

ಓದುಗರ ಪತ್ರ: ಇ- ಖಾತಾ ಆಯ್ತು ಇನ್ನು ಸಿಆರ್ ವಿಶೇಷ ಅಭಿಯಾನ

ಮೈಸೂರಿನಲ್ಲಿ ಸುಮಾರು ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘನೆಯಾದ ಕಟ್ಟಡಗಳು ಪೂರ್ಣಗೊಂಡಿದ್ದರೂ ಸಿ.ಆರ್. (ಕಟ್ಟಡ ಪ್ರಮಾಣ ಪತ್ರ )…

12 hours ago