Mysore
23
scattered clouds

Social Media

ಗುರುವಾರ, 14 ಮೇ 2026
Light
Dark

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ತಿಳಿಸಿದ್ದಾರೆ.

ಬಾಲ್ಯವಿವಾಹವು ಸಮಾಜದ ದೊಡ್ಡ ಪಿಡುಗಾಗಿದ್ದು, ಬಾಲ್ಯದಲ್ಲೇ ಹೆಣ್ಣು ಮಕ್ಕಳಿಗೆ ನೀಡುವ ಶಾಪದಂತಿದೆ. ಪೋಷಕರು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ, ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಬಾಲ್ಯವಿವಾಹ ತಡೆಗಟ್ಟಲು ಜಿಲ್ಲಾಡಳಿತದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬಾಲ್ಯವಿವಾಹ ಕಂಡುಬಂದಲ್ಲಿ ಸಾರ್ವಜನಿಕರು 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.

ಜಾಗೃತಿ ಜಾಥಾದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Tags:
error: Content is protected !!