ಮೈಸೂರು : ಇಲ್ಲಿನ ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಶನಿವಾರ ಭೇಟಿ ನೀಡಿದರು.
ಸೌಜನ್ಯಯುತ ಭೇಟಿ ನೀಡಿದ ಸಂತೋಷ್ ಅವರನ್ನು ಸಂಸದ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಸೇರಿದಂತೆ ನೂರಾರು ಕಾರ್ಯಕರ್ತರು ಬರಮಾಡಿಕೊಂಡರು.
ಕಚೇರಿಗೆ ಭೇಟಿ ನೀಡಿದ ಕೂಡಲೇ ಭಾರತಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಬಿ ಎಲ್ ಸಂತೋಷ್, ಪಕ್ಷದ ಸಂಸದರು, ಶಾಸಕರು, ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿದರು.





