ಮೈಸೂರು : ಕಡೆಯ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಇಂದು ಆಷಾಢ ಮಾಸದ ಕಡೆಯ ಶುಕ್ರವಾರದ ಅಂಗವಾಗಿ ಬೆಳ್ಳಂಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವಿಜಯೇಂದ್ರ ದಂಪತಿ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ತಾಯಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದೇನೆ. ದೇಶಕ್ಕೆ ಒಳ್ಳೆಯದಾಗಬೇಕು. ರಾಜ್ಯಕ್ಕೆ ಒಳ್ಳೆಯದಾಗಬೇಕು ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕನಸು ನನಸಾಗಬೇಕು ಎಂದರು.





