ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು.
ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿರವರ ಆಶೀರ್ವಾದ ಪಡೆದು ಕೆಲಕಾಲ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮೈಸೂರು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ , ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಕೆ.ಎನ್ ಸುಬ್ಬಣ್ಣ, ಚಾಮರಾಜನಗರ ಬಿಜೆಪಿ ಅಧ್ಯಕ್ಷ ನಿರಂಜನ್ ಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




