Mysore
24
heavy intensity rain

Social Media

ಗುರುವಾರ, 09 ಏಪ್ರಿಲ 2026
Light
Dark

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ ಮಾಡಲಾಯಿತು.

ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ನಿಲ್ದಾಣದ ಬಳಿ ಇರುವ ಪ್ರತಿಮೆಗೆ ಸ್ಥಳೀಯ ಶಾಸಕರಾದ ಜಿ.ಟಿ.ದೇವೇಗೌಡ, ಡಾ.ತಿಮ್ಮಯ್ಯ ಮತ್ತು ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರು ಮಾಲಾರ್ಪಣೆ ಮಾಡಿದರು.

ಬಳಿಕ ಬೆಳ್ಳಿ ರಥದ ಮೂಲಕ ಬಾಬು ಜಗಜೀವನ್‌ ರಾಮ್‌ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಪೂರ್ಣ ಕುಂಭ ಹಿಡಿದು ಕಲಾಮಂದಿರದವರಗೆ ನಡೆದ ಮೆರವಣಿಗೆಯಲ್ಲಿ ಡೊಳ್ಳು, ತಮಟೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.

ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗಿಯಾಗಿ ಬಾಬು ಜಗಜೀವನ್ ರಾಮ್ ಜೀ ಕೀ ಜೈ ಎಂದು ಜೈಕಾರ ಹಾಕಿದರು.

 

Tags:
error: Content is protected !!