ಮೈಸೂರು ನಗರ

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದೆ ಎಂಬ ಮಾಹಿತಿ ತಿಳಿದು ಬಂದೆ. ಅದು ಇರುವೆ ಕಚ್ಚಿ ಸಾವಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಇಲ್ಲಿ ವೈದ್ಯರು ಹಾಗೇನು ಆಗಿಲ್ಲ ಅಂತ ಹೇಳುತ್ತಿದ್ದಾರೆ. ಈಗ ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ನಿಖರ ಕಾರಣ ತಿಳಿದು ಬರಲಿದೆ. ಐಸಿಯು ಘಟಕದಲ್ಲಿ ಕಿಟಕಿಗಳ ಸೀಲಿಂಗ್ ಮಾಡಬೇಕಿದೆ. ಇದನ್ನು ರಾಜ್ಯ ಸರ್ಕಾರ ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಲ್ಲಿ ಶುದ್ಧ ಕುಡಿಯುವ ನೀರಿನ‌ ಕೊರತೆ ಇದೆ ಎಂದು ತಿಳಿದು ಬಂದಿದೆ. ಆ ಸಮಸ್ಯೆಯನ್ನ ಕೂಡಲೇ ಸರಿಪಡಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದೆ ಇಂತಹ ಘಟನೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೂಡ ಹೇಳಿದ್ದೇನೆ. ಚಲುವಾಂಬ ಆಸ್ಪತ್ರೆಯಲ್ಲಿ ಕೇವಲ 9 ತಿಂಗಳ ಅವಧಿಯಲ್ಲಿ 349 ಶಿಶು ಮರಣ ಆಗಿದೆ ಎಂದು ತಿಳಿದು ಬಂದಿದೆ. ಇದು ಆತಂಕಕಾರಿ ಬೆಳವಣಿಗೆ. ಯಾವ ಒಂದು ಮಗುವೂ ಸಾಯಬಾರದು. ಹಿಂದಿನ ರೇಷಿಯೊ ಹಾಗೂ ಈಗಿನ ರೇಷಿಯೋ ನೋಡಿ ಶಿಶು ಮರಣ ತಾಳೆ ಮಾಡಬೇಕಿದೆ. ಅದಕ್ಕೆ ತಕ್ಕಂತೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೊಡಬೇಕು. ಸರ್ಕಾರಿ ಆಸ್ಪತ್ರೆ ಅಂದರೆ ವೈದ್ಯರ ಕೊರತೆ, ಕೆ.ಆರ್ ಆಸ್ಪತ್ರೆ ಒಂದೇ ಅಲ್ಲ ಎಲ್ಲಾ ಕಡೆ ಇದೆ. ಸರ್ಕಾರಕ್ಕೆ ಶೀಘ್ರದಲ್ಲೇ ಪತ್ರ ಬರೆದು ಇಲ್ಲಿನ ಸಮಸ್ಯೆಯನ್ನ ಪರಿಹರಿಸುವಂತೆ ಒತ್ತಾಯಿಸುತ್ತೇನೆ. ಜೊತೆಗೆ ಎಲ್ಲಾ ಬಡ ರೊಗಿಗಳ ಬಳಿ ಲಂಚ ಪಡೆಯುತ್ತಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಅಂತವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago