drupadi murmu
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ರ್ಯಾಡಿಸನ್ ಬ್ಲೂ ಹೋಟೆಲ್, ಅರಮನೆ ಹಾಗೂ ಚಾಮುಂಡಿಬೆಟ್ಟದಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ರಾಷ್ಟ್ರಪತಿ ಮುರ್ಮು ಅವರು ಇಂದು ಮಧ್ಯಾಹ್ನ 3.10ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳನ್ನು ಸ್ವಾಗತಿಸಲಿದ್ದಾರೆ. ಬಳಿಕ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇಂದು ರಾತ್ರಿ 8 ಗಂಟೆಗೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ನಾಳೆ ಬೆಳಿಗ್ಗೆ ಮೈಸೂರು ಅರಮನೆಗೆ ಭೇಟಿ ನೀಡಿ, ರಾಜವಂಶಸ್ಥರ ಜೊತೆ ಮಾತುಕತೆ ನಡೆಸಲಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…