ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಪಿ ಶಿವರಾಜು ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ 25ನೇ ವರ್ಷದ ಆಚರಣೆಯಾಗಿದ್ದು, ಸಂವಿಧಾನ ಶಿಲ್ಪಿ ಡಾ: ಬಿ.ಆರ್ ಅಂಬೇಡ್ಕರ್ ಅವರ ಆಶಯ ಮತ್ತು ಚಿಂತನೆಗಳ ಕುರಿತು ನಾಟಕೋತ್ಸವ ನಡೆಯುವುದು ವಿಶೇಷವಾಗಿದೆ ಎಂದರು.
ರಂಗಾಯಣದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ಹಾಗೂ ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಬೇಕು. ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ನೋಡಲ್ ಅಧಿಕಾರಿಯನ್ನು ನಿಯೋಜಿಸಬೇಕು. ನಾಟಕೋತ್ಸವದಲ್ಲಿ ಸಾವಿರಾರು ಜನರು ಭಾಗವಹಿಸುವುದರಿಂದ ಅಗತ್ಯ ಬಂದೋಬಸ್ತ್ , ಉತ್ಸವದಲ್ಲಿ ನೂಕು ನುಗ್ಗಲು ಉಂಟಾಗದಂತೆ ಭದ್ರತೆ, ವಾಹನಗಳ ಸುಗಮ ಸಂಚಾರ, ವಾಹನ ನಿಲುಗಡೆಗೆ ಉತ್ತಮ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆ.ಎಸ್.ಆರ್.ಟಿ.ಸಿ ವತಿಯಿಂದ ನಗರದ ಮುಖ್ಯ ಸ್ಥಳಗಳಿಂದ ಸಂಜೆ 6 ರಿಂದ 10 ಗಂಟೆಯವರಗೆ ರಂಗಾಯಣಕ್ಕೆ ಬಸ್ ಗಳ ವ್ಯವಸ್ಥೆ ಮಾಡಬೇಕು. ಅಗ್ನಿ ಶಾಮಕ ಇಲಾಖೆ ವತಿಯಿಂದ ಕಾರ್ಯಕ್ರಮಕ್ಕೂ ಮೊದಲೇ ಭೇಟಿ ನೀಡಿ ಮುಂಜಾಗ್ರತಾ ವ್ಯವಸ್ಥೆಯನ್ನು ಪರಿಶೀಲಿಸಿ 24*7 ಅಗ್ನಿ ಶಾಮಕ ವಾಹನವನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದರು.
ಮಕ್ಕಳ ಬಹುರೂಪಿ
ಜನವರಿ 11 ರಿಂದ 18 ರವರೆಗೆ ಬೆಳಗಿನ ಅವಧಿಯಲ್ಲಿ ಮಕ್ಕಳ ಬಹುರೂಪಿ ಕಾರ್ಯಕ್ರಮ ನಡೆಯಲಿದೆ. ಶಿಕ್ಷಣ ಇಲಾಖೆಯಿಂದ ಮಕ್ಕಳಿಗೆ ಪ್ರವಾಸ ಕಾರ್ಯಕ್ರಮವನ್ನು ರಂಗಾಯಣಕ್ಕೆ ಆಯೋಜಿಸಿ ಹೆಚ್ಚು ಮಕ್ಕಳು ಪಾಲ್ಗೊಳ್ಳುವಂತೆ ಮಾಡಿ ಎಂದರು.
ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಮಾತನಾಡಿ, ಡಾ: ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ ಪ್ರತಿಯೊಬ್ಬರು ಸಮಾನವಾಗಿ ಬದುಕುವ ಅವಕಾಶ ದೊರಕಿದೆ. ಅವರ ಬಗ್ಗೆ ಹಲವಾರು ಸಂಶೋಧನೆಗಳು ನಡೆಯುತ್ತಿದೆ. ಅವರಿಗೆ ಗೌರವ ಸಲ್ಲಿಸುವ ರೀತಿಯಲ್ಲಿ ಈ ಬಾರಿ ನಾಟಕೋತ್ಸವ ಆಯೋಜಿಸಲಾಗುವುದು. ವಿವಿಧ ಭಾಷೆಗಳ 24 ನಾಟಕ ಹಾಗೂ ಮಕ್ಕಳ 6 ನಾಟಕಗಳು, ವಿಚಾರ ಸಂಕಿರಣ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ರಂಗಾಯಣ ಉಪ ನಿರ್ದೇಶಕ ಡಾ.ಎಂ.ಡಿ ಸುದರ್ಶನ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…
ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…