ಮೈಸೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಹಲವಾರು ಅನಾಹುತಗಳಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ ಹಲವು ಕುಟುಂಬಗಳು ಬೀದಿಗೆ ಬಂದಿವೆ. ಅಲ್ಲದೇ, ಈ ದುಶ್ಚಟದಿಂದ ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂದು ಅಧಿಕವಾಗಿ ಯುವಕ–ಯುವತಿಯರೇ ಆನ್‌ಲೈನ್ ಬೆಟ್ಟಿಂಗ್ ಜಾಲಕ್ಕೆ ಸಿಲುಕಿರುವವರಾಗಿದ್ದಾರೆ. ಪದವಿ ಪಡೆದು ಉದ್ಯೋಗ ಗಳಿಸಿ ಕುಟುಂಬದ ಜವಾಬ್ದಾರಿ ನೋಡಿಕೊಳ್ಳಬೇಕಾದ ಸಮಯದಲ್ಲಿ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿ ನರಳುತ್ತಿದ್ದಾರೆ. ಅಲ್ಲದೇ, ಸಾವಿರಾರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ. ಉನ್ನತ ಸ್ಥಾನದಲ್ಲಿರುವ ತಾವು ಜಾಣ ಮೌನಕ್ಕೆ ಶರಣಾಗಿರುವುದು ತಮ್ಮ ಹುದ್ದೆಗಳಿಗೆ ಘನತೆ ತರುವುದಿಲ್ಲ ಎಂದು ಕಿವಿಮಾತು ಹೇಳಿದರು.
ಅನಧಿಕೃತವಾಗಿ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಒಂದು ತಿಂಗಳೊಳಗೆ…
ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ.…
ಬೆಂಗಳೂರು: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ…
ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…
ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…