ಮೈಸೂರು: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳ ಸರ್ಕಾರ ಕೂಡ ಐದು ಬಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿತ್ತು. ಈ ಹಿಂದೆ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದ ವೇಳೆಯೂ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಆದೇಶ ಹೊರಡಿಸಿದ್ದರು. ಆದರೆ ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ನನಗೆ ಗೊತ್ತಾಗುತ್ತಿಲ್ಲ ಎಂದರು.
ಇನ್ನು ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡದಂತೆ ಹೈಕೋರ್ಟ್ ಆದೇಶ ಕೂಡ ಇದೆ. ಯಾವುದೇ ಕಾರಣಕ್ಕೂ ರಾತ್ರಿ ಸಂಚಾರ ನಿರ್ಬಂಧ ಸಾಧ್ಯವಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಉಡಾನ್ ಯೋಜನೆಯಡಿ ವಿಮಾನಗಳ ಹಾರಾಟಕ್ಕೆ ಉತ್ತೇಜನ ನೀಡಲಾಗುತ್ತಿದೆ. ಎರಡು ಮೂರು ವಿಮಾನಯಾನ ಸಂಸ್ಥೆಗಳ ಜೊತೆ ವಿಮಾನಗಳ ಹಾರಾಟ ಸಂಬಂಧ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಇನ್ನು ಕೆಂಪೇಗೌಡ ವೃತ್ತದ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಇಲಾಖೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…