ಮೈಸೂರು ನಗರ

ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್ ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ?: ಪ್ರತಾಪ್‌ ಸಿಂಹ

ಮೈಸೂರು: ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್ ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ? ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದ್ದಾರೆ.

ಮೈಸೂರು ದಸರಾ ಉದ್ಘಾಟಕರ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ. ಟಿಪ್ಪು ಜಯಂತಿ ಮಾಡಿ ಎಂದು ಮುಸ್ಲಿಂಮರು ಕೇಳಿರಲಿಲ್ಲ. ಸಿದ್ದರಾಮಯ್ಯ ಮುಸ್ಲಿಂಮರ ಓಲೈಕೆಗಾಗಿ ಟಿಪ್ಪು ಜಯಂತಿ ಮಾಡಿದರು. ಬಾನು ಮುಷ್ತಾಕ್ ರನ್ನು ದಸರಾ ಉದ್ಘಾಟನೆಗೆ ಕರೆಯಿರಿ ಎಂದು ಯಾವ ಮುಸ್ಲಿಂ ಕೇಳಿರಲಿಲ್ಲ. ಅದರೂ ಸಿದ್ದರಾಮಯ್ಯ ಮಾಡಿದರು. ಬಾನು ಮುಷ್ತಾಕ್‌ಗೆ ನೇರವಾಗಿ ಪ್ರಶ್ನೆ ಕೇಳ್ತಿನಿ ಜನ ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು?
ಮುಸ್ಲಿಂಮರು ಕನ್ನಡ ಕಲಿಯಲು ಭುವನೇಶ್ವರಿ ತಾಯಿ ಮೂರ್ತಿ ಅಡ್ಡಿಯಾಯಿತು ಎಂದು ಬಾನು ಮುಷ್ತಾಕ್ ಹೇಳಿದ್ದಾರೆ. ಭುವನೇಶ್ವರಿಗೆ ಅರಿಶಿನ ಕುಂಕುಮ ಇಟ್ಟಿದ್ದರಿಂದ ಮುಸ್ಲಿಂಮರು ಕನ್ನಡ ಕಲಿಯಲು ಆಗಿಲ್ಲ ಎಂದು ಮುಷ್ತಾಕ್ ಹೇಳಿದ್ದು ಸತ್ಯ ತಾನೇ? ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್ ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ? ಎಂದು ಪ್ರಶ್ನೆ ಮಾಡಿದರು.

ಇನ್ನು ಅರಿಶಿನ ಕುಂಕುಮ ಬಗ್ಗೆ ಯಾಕೆ ಬಾನು ಮುಷ್ತಾಕ್‌ಗೆ ತಕಾರರು, ಕಿರಿಕಿರಿ ಇದೆ. ಹಿಂದೂಗಳ ಮನೆಯಲ್ಲಿ ಯಾರೇ ಸುಮಂಗಲಿ ಹೋದರು ಕುಂಕುಮ ಕೊಡುತ್ತಾರೆ. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದವಾಗಿ ಕೊಡುತ್ತಾರೆ. ಇಂತಹ ಕುಂಕುಮವೇ ಬಾನು ಮುಷ್ತಾಕ್‌ಗೆ ಕಿರಿಕಿರಿ ಉಂಟು ಮಾಡಿದೆ. ಅರಿಶಿನ ಕುಂಕುಮ ಬಗ್ಗೆ ಬಾನು ಮುಷ್ತಾಕ್‌ಗೆ ದ್ವೇಷದ ಭಾವನೆ ಇದೆ. ನೀವು ನಂಬಿರುವ ನಿಮ್ಮ‌ ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳುವುದಿಲ್ಲ. ನಮ್ಮ ದೇವರು ಹೇಗೆ ಕರೆಸಿಕೊಳ್ಳುತ್ತಾರೆ? ತಮಿಳುನಾಡಿನಲ್ಲಿ ಮುಸ್ಲಿಂಗೆ ಮಾತೃ ಭಾಷೆ ತಮಿಳು. ಕರ್ನಾಟಕದಲ್ಲಿ ಯಾಕೆ ಮುಸ್ಲಿಂರಿಗೆ ಮಾತೃ ಭಾಷೆ ಕನ್ನಡ ಆಗಲ್ಲ? ತಲೆ ಮಾಸಿದ ಕಾಂಗ್ರೆಸ್ ನಾಯಕರು ನನಗೂ ಪ್ರಶ್ನೆ ಮಾಡಿದ್ದಾರೆ. ಇಸ್ಲಾಂ, ಕಿಶ್ಚಿಯನ್ ಅಕ್ರಮಣಕಾರಿ ಆಗಿ ಭಾರತಕ್ಕೆ ಬಂದವರು. ನಮ್ಮ‌ ಆಚಾರ, ವಿಚಾರ, ಸಂಸ್ಕೃತಿ ಒಡೆದು ಹಾಕಲು ಯತ್ನಿಸಿದ್ದು ಘಜ್ನಿ, ಮೊಘಲರು. ಇದೇ ರೀತಿ ನಮ್ಮ ನಂಬಿಕೆಯನ್ನು ಬಾನು ಮುಷ್ತಾಕ್ ಒಡೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತಿಸಿದ ಸಂಸದ ಯದುವೀರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಏನೂ ಮಾತಾಡ್ತಾರಾ ಅದೇ ನಮ್ಮ ಮಾತು. ಅದೇ ನಮ್ಮ ನಿಲುವು. ನಮ್ಮ ಪಕ್ಷದ ನಿಲುವನ್ನೆ ನಾನು ಮಾತಾಡಿದ್ದೇನೆ. ಮೈಸೂರಿಗರಿಗೆ ಒಂದು ಪ್ರಶ್ನೆ ಕೇಳ್ತಿನಿ ಭುವನೇಶ್ವರಿ ಬಗ್ಗೆ ಅವಮಾನಕಾರಿಯಾಗಿ ಮಾತಾಡಿದ ಬಾನು ಮುಷ್ತಾಕ್ ದಸರಾ ಉದ್ಘಾಟಿಸಬೇಕಾ? ಜನರೆ ಹೇಳಲಿ ಎಂದರು.

ಆಂದೋಲನ ಡೆಸ್ಕ್

Recent Posts

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

7 mins ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

22 mins ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

33 mins ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

1 hour ago

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

2 hours ago

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

2 hours ago