prathap simha
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ 100% ಧಾರ್ಮಿಕ ಆಚರಣೆ, ನವರಾತ್ರಿ ನಡೆಯುತ್ತದೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತದೆ. ಬಾನು ಮುಷ್ತಾಕ್‌ಗೆ ತಾಯಿ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆಯಾ? ಅವರು ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ? ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಾನು ಮುಷ್ತಾಕ್ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಘೋಷಿಸಿದರೆ ತಕರಾರು ಇಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿಎಂ ಕರೆಯುತ್ತಾರೆ? ರಿಷಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು, ಅವರನ್ನು ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…
ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…
ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…