ಮೈಸೂರು ನಗರ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಿಷ್ಟು.!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ 100% ಧಾರ್ಮಿಕ ಆಚರಣೆ, ನವರಾತ್ರಿ ನಡೆಯುತ್ತದೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತದೆ. ಬಾನು ಮುಷ್ತಾಕ್‌ಗೆ ತಾಯಿ ಚಾಮುಂಡೇಶ್ವರಿ ಮೇಲೆ ನಂಬಿಕೆ ಇದೆಯಾ? ಅವರು ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ? ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಾನು ಮುಷ್ತಾಕ್‌ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಘೋಷಿಸಿದರೆ ತಕರಾರು ಇಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿಎಂ ಕರೆಯುತ್ತಾರೆ? ರಿಷಬ್‌ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು, ಅವರನ್ನು ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

11 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

11 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

13 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

14 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

14 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

18 hours ago