g parmeshwar
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಒಂದು ಸಮುದಾಯವನ್ನು ಬಿಟ್ಟು ದಸರಾ ಮಾಡಲು ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ಲೇಖಕಿ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ವಿರೋಧ ವ್ಯಕ್ತವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಈ ಹಿಂದೆ ನಿಸ್ಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದಾರೆ. ಮಿರ್ಜಾ ಇಸ್ಮಾಯಿಲ್ ಮೈಸೂರಿನಲ್ಲಿ ದಿವಾನರಾಗಿದ್ದರು. ದಸರಾ ಉದ್ಘಾಟನೆ ಬಗ್ಗೆ ವಿರೋಧ ಮಾಡೋದು ಸರಿಯಿಲ್ಲ. ಇದು ಧಾರ್ಮಿಕ ವಿಚಾರ ಅಲ್ಲ. ಇದು ನಾಡಹಬ್ಬ ದಸರಾ ಮಹೋತ್ಸವ. ಆದ್ದರಿಂದ ಒಂದು ಸಮುದಾಯವನ್ನು ಬಿಟ್ಟು ದಸರಾ ಮಾಡಲು ಆಗುತ್ತಾ? ಎಂದು ಬಾನು ಮುಷ್ತಾಕ್ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನು ಗೃಹ ಇಲಾಖೆಯಲ್ಲಿ ಲಂಚಾವತಾರ ಎಂಬ ಮಾಜಿ ಸಚಿವ ಸಾ.ರಾ.ಮಹೇಶ್ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಾ.ರಾ.ಮಹೇಶ್ ಈ ಹಿಂದೆ ಮಂತ್ರಿ ಆಗಿದ್ದವರು. ಜವಾಬ್ದಾರಿಯುತ ಮುಖಂಡರು. ಯಾರು ಹಣ ಪಡೆದ್ರು, ಯಾರು ಕೊಟ್ರು?. ಈ ಬಗ್ಗೆ ದೂರು ಕೊಟ್ಟರೆ ತನಿಖೆ ಮಾಡಿಸುತ್ತೇವೆ. ಲಂಚ ಕೊಡೋದು ಗೊತ್ತಿದ್ರೆ ರೈಟಿಂಗ್ ಅಲ್ಲಿ ದೂರು ಕೊಡಲಿ ಎಂದು ಹೇಳಿದರು.
ಇನ್ನು ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆ ಬಗ್ಗೆ ನಾನು ಉತ್ತರ ಕೊಡಲ್ಲ. ನನ್ನನ್ನು ಕೇಳಬೇಡಿ ಎಂದು ಜಾರಿಕೊಂಡರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…