Mysore
24
overcast clouds

Social Media

ಶನಿವಾರ, 13 ಜೂನ್ 2026
Light
Dark

ಲಿಂಗತಾರತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣ ತೋರಿಸಿಕೊಟ್ಟರು: ಸುತ್ತೂರು ಶ್ರೀ ಹಿತವಚನ

ಮೈಸೂರು: ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹೇಳಿದರು.

ಮೈಸೂರಿನಲ್ಲಿ ಬಸವ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಕಳೆದ 29 ವರ್ಷಗಳಿಂದ ಎಲ್ಲಾ ಸಂಘಸಂಸ್ಥೆಗಳು ಒಗ್ಗಟ್ಟಿನಿಂದ ಬಸವಜಯಂತಿ ಆಚರಿಸಿಕೊಂಡು ಬರುತ್ತಿರುವುದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು. ಜನಸಾಮಾನ್ಯರ ಭಾಷೆಯನ್ನು ದೈವ ಭಾಷೆಯನ್ನಾಗಿ ಮಾಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲಬೇಕು. ಲಿಂಗತಾತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣನವರು ತೋರಿಸಿಕೊಟ್ಟರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ಬಸವಣ್ಣನವರ ತತ್ವಗಳ ಆಧಾರದ ಮೇಲೆ ನಡೆದುಕೊಳ್ಳುತ್ತಿದ್ದಾರೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸುವುದರ ಜೊತೆಗೆ, ಬಸವಣ್ಣನವರ ಭಾವಚಿತ್ರಗಳನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕುವುದನ್ನು ಕಡ್ಡಾಯ ಮಾಡಿ ಆದೇಶಿಸಿದ್ದಾರೆ ಎಂದು ಹೇಳಿದರು.

Tags:
error: Content is protected !!