ಮೈಸೂರು ನಗರ

ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣನವರೇ ಕಾರಣರು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಬಸವಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ 8ನೇ ವಯಸ್ಸಿನಲ್ಲಿ ಜನಿವಾರ ಧರಿಸುವ ಸಂದರ್ಭ ಬಂದಾಗ ಧಿಕ್ಕರಿಸಿ ನನಗಿಂತ ದೊಡ್ಡವಳಾಗಿರುವ ಅಕ್ಕನಿಗೆ ಜನಿವಾರ ಹಾಕುವಂತೆ ಹೇಳುತ್ತಾರೆ. ಆಗ ಆಕೆ ಹೆಣ್ಣು ಎಂದು ಹೇಳಿದಾಗ ಲಿಂಗ ತಾರತಮ್ಯ ವಿರೋಧಿಸಿದ ಬಸವಣ್ಣ ಸಾಮಾಜಿಕ ಚಳುವಳಿಗೆ ಮುಂದಾದರು. ಸಮಸಮಾಜದ ನಿರ್ಮಾಣಕ್ಕೆ ಬಸವಣ್ಣ ಕಾರಣರು. ಬಸವಣ್ಣನವರು ನಮಗೆ ದೊಡ್ಡ ಪ್ರೇರಣಾ ಶಕ್ತಿ. ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬುದ್ದ, ಬಸವ, ನಾರಾಯಣಗುರು, ಪುಲೆ, ಪೆರಿಯಾರ್, ಗಾಂಧೀಜಿ, ಅಂಬೇಡ್ಕರ್ ಸಮಾಜದ ಸುಧಾರಣೆಯಲ್ಲಿ ತೊಡಗಿಸಿಕೊಂಡು ಚರಿತ್ರೆ ನಿರ್ಮಾಣ ಮಾಡಿದ್ದಾರೆ. 800 ವರ್ಷಗಳ ಹಿಂದೆಯೇ ಅನುಭವಮಂಟಪ ನಿರ್ಮಾಣ ಮಾಡಿದರು. ಅಲ್ಲಮಪ್ರಭು ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಈಗ ಮಹಿಳಾ ಮೀಸಲಾತಿ ಬಿಲ್ ಮಂಡನೆಗೆ ಮುಂದಾಗಿದ್ದಾರೆ. ಆದರೆ ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ತಂದು ಹೆಣ್ಣು ಮಕ್ಕಳಿಗೂ ಸಮಾನ ಹಕ್ಕು ನೀಡುವಂತೆ ಪ್ರತಿಪಾದಿಸಿದಾಗ ಸೋಲುಂಟು ಆಗುವಂತೆ ಮಾಡಿದ್ದು ಸನಾತನ ಮನಸ್ಥಿತಿಯವರು.
ಬುದ್ದ ಬಸವ ಅಂಬೇಡ್ಕರ್ ದೊಡ್ಡ ಪ್ರಜಾಪ್ರಭುತ್ವ ವಾದಿಗಳು. ಸಾಮಾಜಿಕ ತಳಹದಿಯ ಮೇಲೆ ಪ್ರಜಾಪ್ರಭುತ್ವ ನಿಂತಿದೆ. ಸಿದ್ದರಾಮಯ್ಯ ಹಾಗು ನಾನು ಬಸವಣ್ಣನವರ ಅನುಯಾಯಿಗಳು ಎಂದು ಹೇಳಿದರು.

 

 

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

19 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago