Mysore
26
few clouds

Social Media

ಭಾನುವಾರ, 10 ನವೆಂಬರ್ 2024
Light
Dark

ಶ್ರೀ ಕೃಷ್ಣನ ವಿಚಾರಧಾರೆಗಳು ಪ್ರೇರಣೆಯಾಗಲಿ : ರವಿ ಶಾಸ್ತ್ರಿ

ಮೈಸೂರು: ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಜೀವನ ಸಾರವನ್ನು ತಿಳಿಸುತ್ತದೆ, ಶಿಷ್ಟರ ರಕ್ಷಣೆಗಾಗಿ ದುಷ್ಟರ ಸಂಹಾರ ಮಾಡುವ ಮೂಲಕ ಶ್ರೀಕೃಷ್ಣ ಬಾಲ್ಯದ ಲೀಲೆಗಳು ಮಕ್ಕಳಿಗೆ ಪ್ರೇರಣದಾಯಕವಾಗಲಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ ಹೇಳಿದರು.

ನಗರದ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಮತ್ತು ಶ್ರೀ ಕೃಷ್ಣ ಟ್ರಸ್ಟ್ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಗೆ ಕೃಷ್ಣ ರಾಧೆ ವೇಷಭೂಷಣ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಮಹಾಭಾರತ ರಾಮಾಯಣ ಹಾಗೂ ಇತಿಹಾಸ ಪುರುಷರ ಜೀವನ ಚರಿತ್ರೆಗಳನ್ನು ತಿಳಿಸುವ ಕೊಡುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪೋಷಕರ ಜವಾಬ್ದಾರಿಯಾಗಿದೆ. ಕಲಿಕೆಯಲ್ಲಿ ಮಕ್ಕಳಿಗೆ ಉತ್ತಮ ನೀತಿ ಪಾಠಗಳು ಹಾಗೂ ಶ್ರೀ ಕೃಷ್ಣ ಲೋಕಕಲ್ಯಾಣಕ್ಕಾಗಿ ಮಾಡಿದ ಸಾಧನೆಗಳ ಬಗ್ಗೆ ತಿಳುವಳಿಕೆ ಮಾಡಿಸಬೇಕು ಎಂದರು

ನೂರಕ್ಕೂ ಹೆಚ್ಚು ಮಕ್ಕಳು ಶ್ರೀ ಕೃಷ್ಣ ಮತ್ತು ರಾಧೆಯ ವೇಷಭೂಷಣ ಧರಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಉತ್ತಮವಾಗಿ ಶ್ರೀ ಕೃಷ್ಣ , ರಾಧೆ ವೇಷಧರಿಸಿದ ಮಕ್ಕಳಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ಸ್ಪರ್ಧಿಸಿದ ಮಕ್ಕಳಿಗೆ ನೆನಪಿನ ಕಾಣಿಕೆ ನೀಡಲಾಯಿತು

ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ, ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷರಾದ ಪ್ರವೀಣ್ ರಾವ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ, ಕಾರ್ಯದರ್ಶಿ ರಾಘವೇಂದ್ರ, ಶ್ರೀವತ್ಸ, ಮುರಳಿ, ಮಂಗಳ, ಹಾಗೂ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.

Tags: