ಮೈಸೂರು ನಗರ

ಬೂಕರ್‌ ಪ್ರಶಸ್ತಿ ಬಂದಿದ್ದು ನನಗೂ ತುಂಬಾ ಖುಷಿ ತಂದಿದೆ: ಬಾನು ಮುಷ್ತಾಕ್‌

ಮೈಸೂರು: ನನಗೆ ಬೂಕರ್‌ ಪ್ರಶಸ್ತಿ ಬಂದು ಎರಡು ತಿಂಗಳಾಗಿದ್ದು, ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ ಎಂದು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು, ಪ್ರಶಸ್ತಿ ಬಂದು ಎರಡು ತಿಂಗಳು ಆಯ್ತು. ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ. ನನಗೂ ತುಂಬಾ ಖುಷಿ ಆಗಿದೆ. ಸುತ್ತೂರು ಮಠದವರು ನನ್ನನ್ನು ಯಾವಾಗಲೂ ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಅದಕ್ಕಾಗಿ ಈಗಲೂ ನನ್ನನ್ನು ಕರೆದು ಸನ್ಮಾನ ಮಾಡಿದ್ದಾರೆ. ಹಾಗಾಗಿ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.

ಇನ್ನು ಈ ಬಾರಿ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೂಸು ಹುಟ್ಟೋ ಮೊದಲೇ ಕುಲಾವಿ ಒಲೆಸಬಾರದು. ಈ ಬಗ್ಗೆ ನನಗೆ ಏನೂ ಕೂಡ ಗೊತ್ತಿಲ್ಲ ಎಂದು ಹೇಳಿದರು.

ಇನ್ನು ಬೂಕರ್‌ ಪ್ರಶಸ್ತಿ ಬಂದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ ಮಾಡಿದ್ರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಅವರು ವಿಶ್ ಮಾಡಿಲ್ಲ. ವಿಶ್ ಮಾಡ್ತಾರೆ ಅನ್ಕೊಂಡಿದ್ದೀನಿ ಎಂದರು.

ಆಂದೋಲನ ಡೆಸ್ಕ್

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

33 mins ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

44 mins ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

53 mins ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

2 hours ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

2 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

3 hours ago