ಮೈಸೂರು: ಕೇಂದ್ರದ ಕಾರ್ಮಿಕ ವಿರೋಧಿ ಕ್ರಮಗಳು ಹಾಗೂ ಕಾರ್ಪೋರೇಟ್ ಪರ ನಿಲುವು ಖಂಡಿಸಿ ಇಂದು ಭಾರತ್ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.
ಬ್ಯಾಂಕಿಂಗ್, ಇನ್ಯುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್‌ನಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಆದರೆ ರಾಜ್ಯಕ್ಕೆ ಭಾರತ್ ಬಂದ್ ಬಿಸಿ ಸ್ವಲ್ಪವೂ ತಟ್ಟದೇ ಜನಜೀವನ ಎಂದಿನಂತೆ ಇದೆ. ಆದರೆ ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗಿದೆ.
ಮೈಸೂರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್‌ಗಳ ಸಂಚಾರವಿದ್ದು, ಪ್ರಯಾಣಿಕರು ನಿಲ್ದಾಣದಲ್ಲಿ ತುಂಬಿ ತುಳುಕಿದ್ದಾರೆ. ಮೈಸೂರಿನಿಂದ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳಿಗೆ ಸಾಲು ಸಾಲಾಗಿ ಬಸ್‌ಗಳು ಸಂಚಾರ ಮಾಡುತ್ತಿದ್ದು, ನೆಮ್ಮದಿಯಿಂದ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.
ಇನ್ನು ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಜಯದೇವ ಆಸ್ಪತ್ರೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ರೋಗಿಗಳು ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.
ಇನ್ನು ಮೈಸೂರು ನಗರ ಬಸ್ ನಿಲ್ದಾಣದಲ್ಲೂ ಎಂದಿನಂತೆ ಬಸ್‌ಗಳು ಸಂಚಾರ ಮಾಡುತ್ತಿದ್ದು, ಜನರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿದ್ದಾರೆ.





