ಮೈಸೂರು ನಗರ

ರಾಜ್ಯಕ್ಕೆ ತಟ್ಟದ ಭಾರತ್‌ ಬಂದ್‌ ಬಿಸಿ: ಬ್ಯಾಂಕಿಂಗ್‌ ಸೇವೆಯಲ್ಲಿ ಕೊಂಚ ವ್ಯತ್ಯಯ

ಮೈಸೂರು: ಕೇಂದ್ರದ ಕಾರ್ಮಿಕ ವಿರೋಧಿ ಕ್ರಮಗಳು ಹಾಗೂ ಕಾರ್ಪೋರೇಟ್‌ ಪರ ನಿಲುವು ಖಂಡಿಸಿ ಇಂದು ಭಾರತ್‌ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.

ಬ್ಯಾಂಕಿಂಗ್‌, ಇನ್ಯುರೆನ್ಸ್‌, ಪೋಸ್ಟ್‌, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್‌ನಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

ಆದರೆ ರಾಜ್ಯಕ್ಕೆ ಭಾರತ್‌ ಬಂದ್‌ ಬಿಸಿ ಸ್ವಲ್ಪವೂ ತಟ್ಟದೇ ಜನಜೀವನ ಎಂದಿನಂತೆ ಇದೆ. ಆದರೆ ಬ್ಯಾಂಕಿಂಗ್‌ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗಿದೆ.

ಮೈಸೂರು ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಎಂದಿನಂತೆ ಬಸ್‌ಗಳ ಸಂಚಾರವಿದ್ದು, ಪ್ರಯಾಣಿಕರು ನಿಲ್ದಾಣದಲ್ಲಿ ತುಂಬಿ ತುಳುಕಿದ್ದಾರೆ. ಮೈಸೂರಿನಿಂದ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳಿಗೆ ಸಾಲು ಸಾಲಾಗಿ ಬಸ್‌ಗಳು ಸಂಚಾರ ಮಾಡುತ್ತಿದ್ದು, ನೆಮ್ಮದಿಯಿಂದ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.

ಇನ್ನು ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಜಯದೇವ ಆಸ್ಪತ್ರೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ರೋಗಿಗಳು ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.

ಇನ್ನು ಮೈಸೂರು ನಗರ ಬಸ್‌ ನಿಲ್ದಾಣದಲ್ಲೂ ಎಂದಿನಂತೆ ಬಸ್‌ಗಳು ಸಂಚಾರ ಮಾಡುತ್ತಿದ್ದು, ಜನರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

3 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

3 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

3 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

4 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

5 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

6 hours ago