ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮಾಚರಣೆ ಆಚರಿಸಿದ್ದಾರೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ನಿನ್ನೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸಿದ್ದರಾಮಯ್ಯ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.
ನಗರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಭಾವಚಿತ್ರ ಹಿಡಿದು ಸತ್ಯ ಮೇವ ಜಯತೆ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಆಚರಣೆ ಮಾಡಿದರು.
ಮಾಜಿ ಮುಡಾ ಅಧ್ಯಕ್ಷ ರಾಜೀವ್ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಇನ್ನು ವಿಶೇಷವೆಂದರೆ ಸಂಭ್ರಮಾಚರಣೆ ವೇಳೆ ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಬಿಜೆಪಿ ಮಾಜಿ ಎಂಎಲ್‌ಸಿ ಗೋ ಮಧುಸೂಧನ್ ಅವರಿಗೂ ಸಿಹಿ ಹಂಚಿ ಖುಷಿಪಟ್ಟರು.





