big relief for the CM’s wife in the Supreme Court
ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ.
ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ಸುಪ್ರೀಂಕೋರ್ಟ್ ಹಲವು ಪ್ರಕರಣದ ಬಗ್ಗೆ ತರಾಟೆಗೆ ತೆಗೆದುಕೊಂಡಿದೆ. ಇಡಿ ಈ ಪ್ರಕರಣಕ್ಕೆ ಮಾತ್ರ ತರಾಟೆಗೆ ತೆಗೆದುಕೊಂಡಿಲ್ಲ. ಪಾರ್ವತಿ ಸಿದ್ದರಾಮಯ್ಯ ಇಡಿ ಮುಂದೆ ಯಾಕೆ ಹಾಜರಾಗಿ ವಿಚಾರಣೆ ಎದುರಿಸುತ್ತಿಲ್ಲ. ಇಡಿ ನೋಟಿಸ್ ಕೊಟ್ಟರೆ ಸುಪ್ರೀಂಕೋರ್ಟ್ ಮೊರೆ ಹೋಗುತ್ತಾರೆ. ಹಾಗಾದ್ರೆ ಲೋಕಾಯುಕ್ತ ಅಧಿಕಾರಿಗಳ ಜೊತೆ ಮೊದಲೇ ಮಾತುಕತೆ ಮಾಡಿಕೊಂಡು ವಿಚಾರಣೆಗೆ ಹಾಜರಾಗಿದ್ರಾ? ಎಂದು ಸಿಎಂ ಪತ್ನಿ ಪಾರ್ವತಿಗೆ ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇಕೆ? ಇಡೀ ಮುಡಾ ಪ್ರಕರಣವನ್ನ ಸುಪ್ರೀಂಕೋರ್ಟ್ ರದ್ದುಗೊಳಿಸಿಲ್ಲ. ಇಡಿ ನೋಟಿಸ್ ಕೊಟ್ಟಿರುವುದು ತಪ್ಪು ಅನ್ನುವುದಾದರೇ ತನಿಖೆ ಸಂಸ್ಥೆಗಳು ವಿಚಾರಣೆ ಮಾಡುವುದೇ ತಪ್ಪಾ.? ಆರೋಪಿಗಳ ಮನಸ್ಥಿತಿ ಹೇಗಿದೆ ಎಂಬುದು ಇಲ್ಲೇ ಗೊತ್ತಾಗಲಿದೆ. ಇನ್ನು ಮುಂದೆ ಕಾನೂನಾತ್ಮಕವಾದ ಹೋರಾಟ ಮುಂದುವರೆಯುತ್ತದೆ. ನನ್ನ ಹೋರಾಟ ಯಾವುದೇ ಕಾರಣಕ್ಕೆ ನಿಲ್ಲುವುದಿಲ್ಲ. ಸ್ನೇಹಮಯಿ ಕೃಷ್ಣನ ಬಳಿ ಸಾಕಷ್ಟು ದಾಖಲೆಗಳು ಇದೆ ಅನ್ನೋ ಕಾರಣಕ್ಕೆ ವಿಚಾರಣೆಗೆ ಬರುತ್ತಿಲ್ಲ. ಈ ವಿಚಾರ ಇಡೀ ದೇಶದ ಜನರಿಗೆ ಗೊತ್ತಿದೆ. ತನಿಖಾ ಸಂಸ್ಥೆಗಳು ಯಾವ ರೀತಿ ತನಿಖೆ ಮಾಡಬೇಕು ಎಂಬುದನ್ನು ನ್ಯಾಯಾಲಯ ತಿಳಿಸಲಿ ಎಂದು ಆಗ್ರಹಿಸಿದರು.
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…