ಮೈಸೂರು ನಗರ

ಮೈಸೂರಿನಲ್ಲಿ ಬೈಕ್ ಟ್ಯಾಕ್ಸಿ ಚಾಲಕರ ಸಭೆ : ಪ್ರತಿಭಟನೆಗೆ ನಿರ್ಧಾರ

ಮೈಸೂರು : ಮೈಸೂರು ನಗರದಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಸಂಘದ ವತಿಯಿಂದ ಇಂದು ನಗರದ ಒಂಟಿಕೊಪ್ಪಲ್ ನ ಚೆಲುವಾಂಬ ಪಾರ್ಕ್ ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರ ಸಭೆ ನಡೆಯಿತು.

ಸಂಘದ ಅಧ್ಯಕ್ಷ ಮಹಾದೇವ ನಾಯಕ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಬೈಕ್ ಟ್ಯಾಕ್ಸಿ ಚಾಲಕರುಗಳು ತಮ್ಮ ಕೋರಿಕೆಗಳನ್ನು ಮುಂದಿಟ್ಟು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.

ಮೈಸೂರಿನ ನಗರದಲ್ಲಿ ಸುಮಾರು 250ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಚಾಲಕರುಗಳಿದ್ದು, ಇವರುಗಳು ರಾಪಿಡ್ ಆಟೋ, ಉಬರ್ ಆಟೋ, ಓಲಾ ಆಟೋಗಳಂತೆ ತಮ್ಮ ಬೈಕುಗಳಲ್ಲಿ ಆನ್ಲೈನ್ ಮೂಲಕ ಬುಕ್ ಮಾಡಿದ ಗ್ರಾಹಕರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದುಕೊಂಡು ಹೋಗಿ ಬಿಡುವ ಕಾಯಕದಲ್ಲಿ ತೊಡಗಿಕೊಂಡಿರುತ್ತಾರೆ, ಇವರುಗಳು ಆನ್ಲೈನ್ ಮುಖಾಂತರ ಬುಕ್ ಮಾಡಿದ ಗ್ರಾಹಕರ ಸ್ಥಳಗಳಿಗೆ ತೆರಳಿ ಅವರನ್ನು ತಮ್ಮ ಬೈಕುಗಳಲ್ಲಿ ಕೂರಿಸಿಕೊಂಡು 3km ಗೆ 30 ರೂಪಾಯಿ ಮಾತ್ರ ಪ್ರಯಾಣ ದರ ತೆಗೆದುಕೊಂಡು ಗ್ರಾಹಕರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಾರೆ, ಇದರಿಂದ ಅವರ ಮತ್ತು ಅವರ ಕುಟುಂಬದ ಜೀವನ ಸಾಗುತ್ತದೆ.

ಇವರ ಈ ಕಾಯಕದಲ್ಲಿ ಸರ್ಕಾರಕ್ಕೂ ಕೂಡ ಜಿಎಸ್‌ಟಿ ತೆರಿಗೆ ರೂಪದಲ್ಲಿ ಹಣ ಪಾವತಿಸುತ್ತಾರೆ ಹೀಗಿರುವಾಗ ನ್ಯಾಯಾಲಯಗಳು ಬೈಕ್ ಟ್ಯಾಕ್ಸಿ ವೃತ್ತಿಯನ್ನು ರದ್ದುಗೊಳಿಸಲು ಆದೇಶ ಹೊರಡಿಸಿದೆ, ಇದರಿಂದ ನಮಗೆ ತುಂಬಾ ತೊಂದರೆ ಆಗಿದೆ. ನಮ್ಮ ಹೆಂಡತಿ ಮಕ್ಕಳ ಸಾಕಲು ತುಂಬಾ ಕಷ್ಟವಾಗುತ್ತದೆ. ಆದ್ದರಿಂದ ಸರ್ಕಾರ ನಮಗೆ ಬೇರೊಂದು ಪರಿಹಾರ ಮಾರ್ಗ ಒದಗಿಸಿಕೊಡಬೇಕು, ಇಲ್ಲದಿದ್ದರೆ ನ್ಯಾಯಾಲಯಕ್ಕೆ ಮನದಟ್ಟು ಮಾಡಿ ಬೈಕ್ ಟ್ಯಾಕ್ಸಿ ಓಡಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸುವುದಾಗಿ ಸಂಘದ ಅಧ್ಯಕ್ಷ ಮಹಾದೇವ ನಾಯಕ ತಿಳಿಸಿದರು.

ಈ ಬಗ್ಗೆ ನಮಗೆ ಬೈಕ್ ಟ್ಯಾಕ್ಸಿ ಓಡಿಸಲು ಅವಕಾಶ ಕೋರಿ ಅಥವಾ ನಮ್ಮ ಜೀವನಕ್ಕೆ ಪರ್ಯಾಯ ಹುದ್ದೆಯನ್ನು ಸೃಷ್ಟಿಸಿ ಕೊಡಬೇಕು ಎಂದು ಒತ್ತಾಯಿಸಿ ಈಗಾಗಲೇ ಮಾನ್ಯ ಸಾರಿಗೆ ಸಚಿವರು, ಮೈಸೂರಿನ ಶಾಸಕರುಗಳು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ನ್ಯಾಯಾಲಯವು ನಮ್ಮ ಈ ಮನವಿಯನ್ನು ಪರಿಷ್ಕರಿಸಿ ಬೈಕ್ ಟ್ಯಾಕ್ಸಿ ರದ್ದತಿ ಆದೇಶವನ್ನು ಹಿಂಪಡೆಯಬೇಕೆಂದು ಕೋರಿಕೊಂಡಿದ್ದೇವೆ, ಈ ತಿಂಗಳ 15ನೇ ತಾರೀಖಿನೊಳಗೆ ನಮಗೆ ನಿಖರವಾದ ಮಾಹಿತಿ ಬೇಕು. ನ್ಯಾಯ ಬೇಕು ಇಲ್ಲದಿದ್ದಲ್ಲಿ ಎಲ್ಲಾ 250 ಬೈಕ್ ಟ್ಯಾಕ್ಸಿ ಚಾಲಕರುಗಳು ಅವರವರ ಕುಟುಂಬದವರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.

ನಮ್ಮ ಬೈಕ್ ಟ್ಯಾಕ್ಸಿ ಸೇವೆಯಿಂದ ಅವಸರಕ್ಕೆ ಗ್ರಾಹಕರಿಗೆ ಉಪಯೋಗವಾಗುತ್ತದೆ, ಆಸ್ಪತ್ರೆಗಳಿಗೆ, ಕಚೇರಿಗಳಿಗೆ, ಬಸ್ ನಿಲ್ದಾಣ, ರೈಲು ನಿಲ್ದಾಣಗಳಿಂದ ತಮ್ಮ ಮನೆಗಳಿಗೆ ತೆರಳುವ ಗ್ರಾಹಕರು, ಮತ್ತು ಇತರೆ ಅವಸರ ಕೆಲಸಗಳಿಗೆ ತೆರಳುವ ಗ್ರಾಹಕರಗಳು ಕರೆ ಮಾಡಿದ ತಕ್ಷಣ ಅವರ ಇರುವ ಸ್ಥಳಗಳಿಗೆ ಹೋಗಿ ಅವರುಗಳನ್ನು ಅವರು ಹೇಳಿದ ಸ್ಥಳಗಳಿಗೆ ಸುರಕ್ಷಿತವಾಗಿ ಕರೆದೊಯ್ದು ಬಿಟ್ಟು ಬರುತ್ತೇವೆ ನಮ್ಮಿಂದ ಗ್ರಾಹಕರಿಗೆ ತೊಂದರೆ ಆಗುವುದಿಲ್ಲ. ಅವರ ಸುರಕ್ಷತೆಯೇ ನಮ್ಮ ಧ್ಯೇಯವಾಗಿರುತ್ತದೆ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿರುತ್ತೇವೆ. ಹೀಗಿದ್ದರೂ ಸಹ ಬೈಕ್ ಟ್ಯಾಕ್ಸಿ ಕೃತಿ ಜೀವನಕ್ಕೆ ಕಡಿವಾಣ ಹಾಕಿರುವುದು ನಮ್ಮ ಬದುಕನ್ನು ಹಳ್ಳಕ್ಕೆ ತಳ್ಳಿದಂತ ಇದೆ ಎಂದು ಬೈಕ್ ಟ್ಯಾಕ್ಸಿ ಚಾಲಕರುಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ಮತ್ತೊಬ್ಬ ಸದಸ್ಯ ಎಂ. ಶಂಕರ್ ಮಾತನಾಡಿ, ಸರ್ಕಾರ ಯಾವುದೇ ತೀರ್ಮಾನಕ್ಕೆ ಬರೆದಿದ್ದಲ್ಲಿ ನಾವು ಜನತಾ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ, ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಆದ್ದರಿಂದ ಸರ್ಕಾರವು ನಮ್ಮ ಬದುಕಿಗೆ ಆಶ್ರಯವಾಗಬೇಕು ಮತ್ತೆ ಬೈಕ್ ಟ್ಯಾಕ್ಸಿ ಓಡಿಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಸಭೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago