ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ.
ಧರ್ಮಕ್ಕಾಗಿ ಧರ್ಮಯುದ್ಧ ಎಂಬ ಹೆಸರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದ್ದು, ಮೈಸೂರಿನಿಂದಲೂ ಧರ್ಮಸ್ಥಳಕ್ಕೆ ನೂರಾರು ಬಿಜೆಪಿ ಕಾರ್ಯಕರ್ತರು ತೆರಳಿದರು.
ಚಾಮರಾಜ ಕ್ಷೇತ್ರದ ನೂರಾರು ಕಾರ್ಯಕರ್ತರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದರು.
ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ಮಾಜಿ ನಗರಪಾಲಿಕೆ ಸದಸ್ಯರಾದ ಪ್ರಮೀಳಾ ಭರತ್, ಸುಬ್ಬಯ್ಯ, ಎಸ್ ಕೆ ದಿನೇಶ್, ಸ್ಮಾರ್ಟ್ ಮಂಜು, ಬಿ ಎಂ ರಘು, ಪಂಕಜ್, ಜಯಣ್ಣ, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





