Mysore
24
mist

Social Media

ಗುರುವಾರ, 12 ಡಿಸೆಂಬರ್ 2024
Light
Dark

ರೈತರ ಕಷ್ಟ ಆಲಿಸೋದನ್ನು ಬಿಟ್ಟು ವಿರೋಧ ಪಕ್ಷಗಳು ಪಾದಯಾತ್ರೆ ಎಂಬ ನಾಟಕವಾಡುತ್ತಿದ್ದಾರೆ: ಇಂಗಲಗುಪ್ಪೆ ಕೃಷ್ಣೇಗೌಡ ಕಿಡಿ

ಮೈಸೂರು: ಭಾರೀ ಮಳೆಯಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ಕಷ್ಟಗಳನ್ನು ಆಲಿಸದೇ ವಿರೋಧ ಪಕ್ಷಗಳು ಪಾದಯಾತ್ರೆ ಎಂಬ ನಾಟಕವಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅತೀವೃಷ್ಟಿ, ಪ್ರವಾಹ, ಮಳೆ ಗಾಳಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.

ಇತ್ತೀಚೆಗಷ್ಟೇ ಭೀಕರ ಬರಗಾಲದಿಂದ ತತ್ತರಿಸಿ ಸುಧಾರಿಸಿಕೊಳ್ಳುವಷ್ಟರಲ್ಲೇ ಅತೀವೃಷ್ಟಿಗೆ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಅನೇಕ ಬೆಳೆ ಹಾನಿಯಾಗಿದೆ.

ಬೆಳೆದ ಬೆಲೆಗೆ ರೈತರಿಗೆ ಸೂಕ್ತ ಬೆಲೆಯೂ ಸಿಗುತ್ತಿಲ್ಲ. ಮತ್ತೊಂದೆಡೆ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರ ಶೋಷಣೆ ಮುಂದುವರಿದಿದೆ.

ಈ ಎಲ್ಲಾ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡುವ ಬದಲು, ಮುಡಾ ವಿಚಾರ ಮುಂದಿಟ್ಟುಕೊಂಡು ರೈತರ ಸಮಸ್ಯೆಗಳನ್ನು ಮರೆ ಮಾಡುತ್ತಿವೆ.

ಕೂಡಲೇ ತಮ್ಮ ಪಾದಯಾತ್ರೆಗಳೆಂಬ ನಾಟಕ ನಿಲ್ಲಿಸಿ ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

Tags: