ಮೈಸೂರು: ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಅವರ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಮಾಡುತ್ತಿರುವ ಪಾದಯಾತ್ರೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಕಿಡಿಕಾರಿದರು.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು.
ಇವರು ಮಾಡುತ್ತಿರುವ ಪಾದಯಾತ್ರೆ ಬರೀ ಡೋಂಗಿ ಪಾದಯಾತ್ರೆ. ಪಾದಯಾತ್ರೆಗೆ ಜನರನ್ನು ಹಣ ಕೊಟ್ಟು ಕರೆದುಕೊಂಡು ಬರಲಾಗುತ್ತಿದೆ. ಇದು ಎಚ್‌ಡಿಕೆ ಹಾಗೂ ವಿಜಯೇಂದ್ರ ಪ್ರಯೋಜಕತ್ವದ ಪಾದಯಾತ್ರೆ ಎಂದು ಟೀಕೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಬ್ಬ ಪ್ರಾಮಾಣಿಕ ಮುಖ್ಯಮಂತ್ರಿ. ಅವರು ಪಾರದರ್ಶಕ ಆಡಳಿತ ಕೊಡುತ್ತಿರುವ ಸಿಎಂ. ಆದರೆ ವಿನಾ ಕಾರಣ ಸಿದ್ದರಾಮಯ್ಯರ ಮೇಲೆ ಆಪಾದನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.
ಇನ್ನು ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರೆಲ್ಲಾ ತಮ್ಮ ಬೇನಾಮಿ ಆಸ್ತಿಗಳನ್ನು ಘೋಷಣೆ ಮಾಡಲಿ. ಈ ಮೂಲಕ ಅವರು ಎಷ್ಟು ಪ್ರಾಮಾಣಿಕರು ಎಂಬುದನ್ನು ಸಾಬೀತುಪಡಿಸಿಕೊಳ್ಳಲಿ ಎಂದು ಸವಾಲು ಹಾಕಿದರು.
ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಏಳಿಗೆ ಸಹಿಸಲಾಗದೇ ಈ ರೀತಿ ಮಾಡುತ್ತಿದ್ದಾರೆ. ಸಿಎಂ ಕುರ್ಚಿಗೆ ಯಾವುದೇ ಧಕ್ಕೆ ಆಗಲ್ಲ ಎಂದು ಸಿಎಂ ಸಿದ್ದು ಪರ ಬ್ಯಾಟ್ ಬೀಸಿದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…