ಮೈಸೂರು: ರಾಜ್ಯ ಸರ್ಕಾರದ ಧಿಮಾಕು, ಅಹಂಕಾರ, ಸೊಕ್ಕಿನ ವಿರುದ್ಧ ಬಿಜೆಪಿ ಮೈಸೂರಿನಿಂದಲೇ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಎಂಎಲ್‌ಸಿ ರವಿಕುಮಾರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಹೋರಾತ್ರಿ ಧರಣಿಗೆ ಮುಂದಾಗುವ ಮುನ್ನಾ ದಿನವೂ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿತು. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಏಪ್ರಿಲ್.7ರಿಂದ ಮೈಸೂರಿನಿಂದಲೇ ಹೋರಾಟ ಆರಂಭಿಸುತ್ತೇವೆ. ರಾಜ್ಯ ಸರ್ಕಾರದ ಸೊಕ್ಕನ್ನು ಚಾಮುಂಡೇಶ್ವರಿ ಮುರಿಯಬೇಕು ಎಂಬ ಸಂಕಲ್ಪದೊಂದಿಗೆ ಬಿಜೆಪಿ ಹೋರಾಟ ಆರಂಭಿಸಲಿದೆ. ರಾಜ್ಯ ಸರ್ಕಾರ ಕಸದ ಮೇಲೂ ಟ್ಯಾಕ್ಸ್, ಮನೆಗಳ ಮುಂದೆ ನಿಲ್ಲಿಸುವ ವಾಹನಗಳ ಮೇಲೆ ಟ್ಯಾಕ್ಸ್ ಸೇರಿದಂತೆ ರಾಜ್ಯದ ಜನರಿಗೆ ತೆರಿಗೆ ಭಾರ ಹೊರಿಸುತ್ತಿದೆ. ನವಾಬ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ. ಮೈಸೂರಿನಲ್ಲಿ ಆರಂಭವಾಗುವ ಪ್ರತಿಭಟನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಇನ್ನಿತರ ನಾಯಕರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…