ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ.
ಬಿಜೆಪಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ನಗರದ ಗನ್‌ಹೌಸ್ ಹಾಗೂ ಕೋಟೆ ಆಂಜನೇಯ ದೇವಸ್ಥಾನದ ಬಳಿ ಕೈಗೊಂಡಿರುವ ಭದ್ರತೆಯನ್ನು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಮುತ್ತುರಾಜ್ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ. ಬಂದೋಬಸ್ತ್‌ಗೆ ಸುಮಾರು 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.