ಮೈಸೂರು: ಒಳಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ. ಮಾಜಿ ಸಚಿವ ಹಾಗೂ ಹಾಲಿ ಸಂಸದ ಗೋವಿಂದ ಕಾರಜೋಳ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ.
ಬಿಜೆಪಿ ಅಧಿಕಾರದಲ್ಲಿದ್ದಾಗ ಒಳಮೀಸಲಾತಿಯನ್ನು ಯಾಕೆ ಜಾರಿಗೊಳಿಸಲಿಲ್ಲ. ಹಾಗಾಗಿ ಒಳಮೀಸಲಾತಿ ಜಾರಿ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆಯಿಲ್ಲ. ರಾಜ್ಯ ಸರ್ಕಾರ ಅತಿ ಶೀಘ್ರದಲ್ಲೇ ಒಳಮೀಸಲಾತಿ ಜಾರಿಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.





