ಮೈಸೂರು ನಗರ

ಮೈಸೂರಿನ ಚಾಮುಂಡಿಬೆಟ್ಟಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಕಳೆದ ಕೆಲ ತಿಂಗಳಿನಿಂದ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಂಡ್‌ ಟೀಂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸಲೇಬೇಕು ಎಂದು ಪಟ್ಟು ಹಿಡಿದಿರುವ ಯತ್ನಾಳ್‌ ಅಂಡ್‌ ಟೀಂ ಪದೇ ಪದೇ ಹೈಕಮಾಂಡ್‌ ಭೇಟಿಗೆ ಯತ್ನಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿಂದು ಬೆಂಬಲಿಗರೊಂದಿಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಯತ್ನಾಳ್‌ ಅವರು, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಈ ವೇಳೆ ದೇವಸ್ಥಾನಕ್ಕೆ ಆಗಮಿಸಿದ್ದ ಸಾರ್ವಜನಿಕರು ಯತ್ನಾಳ್‌ರನ್ನು ಕಂಡೊಡನೆ ಜೈ ಬಿಎಸ್‌ವೈ ಹಾಗೂ ಜೈ ವಿಜಯೇಂದ್ರ ಎಂದು ಘೋಷಣೆ ಕೂಗಿದರು. ಈ ವೇಳೆ ಯತ್ನಾಳ್‌ಗೆ ಇರಿಸು ಮುರಿಸು ಉಂಟಾಗಿ ಏನನ್ನೂ ಮಾತನಾಡದೇ ತೆರಳಿದರು.

ಈ ಹಿನ್ನೆಲೆಯಲ್ಲಿ ಶಾಸಕ ಯತ್ನಾಳ್‌ ಅವರು, ಬಿಜೆಪಿ ಶಿಸ್ತು ಸಮಿತಿಯ ಶೋಕಾಸ್‌ ನೋಟಿಸ್‌ಗೆ ಹೆದರಿ ಸುಮ್ಮನಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದ್ದು, ಹೈಕಮಾಂಡ್‌ ಬಿ.ವೈ.ವಿಜಯೇಂದ್ರ ಅವರ ಪರ ಮತ್ತೆ ಒಲವು ತೋರಿದೆ ಎನ್ನಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

12 mins ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

1 hour ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

3 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

3 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago