ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ ಮಂಡನೆಯು ಎದುರಾಳಿ ಮಣಿಸುವ ತಂತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರದ ಅವಧಿ ಮುಕ್ತಾಯವಾಗುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದರು.
ಜಾತಿಗಣತಿ ವೈಜ್ಞಾನಿಕವಾಗಿಲ್ಲ. ಇದನ್ನ ಸ್ವತಃ ತಮ್ಮ ಪಕ್ಷದ ಶಾಸಕರು, ಸಚಿವರೇ ಒಪ್ಪುತ್ತಿಲ್ಲ. ಹೀಗಿದ್ದರು ಜಾತಿಗಣತಿ ವರದಿ ಜಾರಿಗೆ ತರುತ್ತಿರುವ ಉದ್ದೇಶ ಬೇರೆಯೇ ಇದೆ ಎಂದು ಹೇಳಿದರು.
ಜಾತಿಗಣತಿ ವರದಿ ಮಂಡನೆ ಮೂಲಕ ಎಲ್ಲರ ಗಮನ ಬೇರೆಡೆ ಸೆಳೆದು ಕಾಂಗ್ರೆಸ್ ತನ್ನ ಹಗರಣಗಳನ್ನು ಮರೆಮಾಚುವ ಕೆಲಸ ಮಾಡುತ್ತಿದೆ. ಜಾತಿಗಣತಿ ವರದಿ ಸೋರಿಕೆ ಒಂದು ಟೆಸ್ಟ್ ಡೋಸ್ ಅಷ್ಟೇ ಎಂದು ವ್ಯಂಗ್ಯವಾಡಿದರು.
ಇದೊಂದು ಅವಜ್ಞಾನಿಕ ವರದಿಯಾಗಿದ್ದು, ಮುಂದೆ ಸರ್ಕಾರದ ವಿರುದ್ಧ ಸಾಧು ಸಂತರು, ಸಾಹಿತಿಗಳು ಹೊರಟಕ್ಕೆ ಇಳಿಯಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಗೋಕಾಕ್ ಮಾದರಿ ಚಳುವಳಿ ನಡೆಯಲಿದೆ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…