ಮೈಸೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಆಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಇಲ್ಲ. ಈ ಬಾರಿಯೂ ಮೈಸೂರಿಗೆ ಏನು ವಿಶೇಷ ಯೋಜನೆ ನೀಡಿಲ್ಲ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಬಜೆಟ್ ಮಂಡಿಸಿದ್ದಾರೆ. ಮುಸ್ಲಿಂಮರಿಗೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಈ ಸರ್ಕಾರದಿಂದ ಏನನ್ನೂ ನಿರೀಕ್ಷೆ ಮಾಡಲು ಸಾದ್ಯವಿಲ್ಲ ಎಂದು ರಾಜ್ಯ ಬಜೆಟ್ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಇಡಿ ಸಮನ್ಸ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕೋರ್ಟ್‌ನಲ್ಲಿ ಸಮನ್ಸ್ ರದ್ದಾಗಿದೆ. ಇಡಿ ಅಧಿಕಾರಿಗಳು ಮೇಲ್ಮನವಿ ಸಲ್ಲಿಸುತ್ತಾರೆ. ಯಾವುದೇ ಕಾರಣಕ್ಕೂ ಮುಡಾ ಹಗರಣ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಾವು ಸುಪ್ರೀಂಕೋರ್ಟ್‌ಗೆ ಬೇಕಾದ್ರೂ ಹೋಗ್ತೀವಿ. ಮುಡಾ ಹಗರಣ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…
ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್…
ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ…