ಮೈಸೂರು ನಗರ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ

ಮೈಸೂರು: ನಾವು ಕೂಡ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದರು.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್‌ ಉದ್ದೇಶ. ಏಕೆಂದರೆ ನಾವು ತಾಲಿಬಾನಿಗಳ ರೀತಿ ಅವರಿಗೆ ಉತ್ತರ ಕೊಡುವುದಿಲ್ಲ. ಒಂದು ವೇಳೆ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಕಿಡಿಕಾರಿದರು.

ಇನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಮೊದಲು ಈ ರೀತಿ ಇರಲಿಲ್ಲ. ಮೊದಲು ಇದೇ ರೀತಿ ಇದ್ದಿದ್ದರೆ ಎಂಟು ಬಾರಿ ಅವರು ಗೆಲ್ಲುತ್ತಿರಲಿಲ್ಲ. ಈಗ ಕಾಂಗ್ರೆಸ್‌ ಪಕ್ಷ ತಮ್ಮ ನಿಲುವನ್ನು ಅವರ ಬಾಯಿಯಿಂದ ಹೇಳಿಸುತ್ತಿದೆ. ಸಿಎಂ ಕೂಡ ಅದನ್ನು ಸಮರ್ಥಿಸಿಕೊಂಡಿದ್ದಾರೆ. ಹಾಗಾದರೇ ಕಾಂಗ್ರೆಸ್‌ನವರು ಹಜ್‌ ಯಾತ್ರೆಗೆ ಯಾಕೆ ದುಡ್ಡು ಕೊಡುತ್ತಾರೆ. ಹಜ್‌ ಯಾತ್ರೆಗೆ ಹೋದರೆ ಬಡತನ ನಿರ್ಮೂಲನೆಯಾಗುತ್ತಾ ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಹಜ್‌ ಯಾತ್ರೆಗೆ ಯಾಕೆ ಸರ್ಕಾರ ದುಡ್ಡು ಕೊಡಬೇಕು. ಕೂಡಲೇ ಹಜ್‌ ಯಾತ್ರೆಯ ಸಬ್ಸಿಡಿ ನಿಲ್ಲಿಸಿಬಿಡಿ ನೋಡೋಣ. ನೀವು ನಮ್ಮನ್ನು ಕೆಣಕಿದ್ದಕ್ಕೆ ನಾವು ಇದನ್ನು ಕೇಳುತ್ತಿದ್ದೇವೆ. ಕುಂಭಮೇಳಕ್ಕೆ ಯಾರನ್ನೂ ಒತ್ತಡದಿಂದ ಕರೆಯುತ್ತಿಲ್ಲ. ಎಲ್ಲರೂ ಅವರ ನಂಬಿಕೆಯಿಂದ ಹೋಗುತ್ತಿದ್ದಾರೆ. ಅದನ್ನು ಯಾಕೆ ನೀವು ಪ್ರಶ್ನೆ ಮಾಡುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

2 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

2 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

8 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

8 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

8 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

8 hours ago