ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಪಾಲಿಕೆ ವಿರುದ್ಧ ಬಿಜೆಪಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಮೈಸೂರು ಪಾಲಿಕೆ ವಿರುದ್ಧ ಮೌನ ಪ್ರತಿಭಟನೆ ನಡೆಸಿದ ಮೈಸೂರು ನಗರ ಬಿಜೆಪಿ ಘಟಕವು, ಯಾವುದೇ ಕಾರಣಕ್ಕೂ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ಮರುನಾಮಕರಣ ಮಾಡಬಾರದು. ಒಂದು ವೇಳೆ ಸಿದ್ದರಾಮಯ್ಯ ಹೆಸರಿಟ್ಟರೆ ಮುಂದಿನ ದಿನಗಳಲ್ಲೂ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹಾಗಾಗಿ ಈ ವಿಚಾರವನ್ನು ಇಲ್ಲಿಗೆ ಕೈಬಿಡಬೇಕು ಎಂದು ಆಗ್ರಹಿಸಿದೆ.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಎಲ್.ನಾಗೇಂದ್ರ, ಮಹದೇವಸ್ವಾಮಿ, ಮಾಜಿ ಮೇಯರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಪ್ರತಿಭಟನೆ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.