ಮೈಸೂರು : ಮೈಸೂರಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಬೆಲೆ ಏರಿಕೆ ವಿರೋಧಿಸಿ ಜಿಪಂ ಕಚೇರಿ ಮುಂಭಾಗ ಬಿಜೆಪಿ ಮೈಸೂರು ಗ್ರಾಮಾಂತರ ಮತ್ತು ನಗರ ಬಿಜೆಪಿ ಘಟಕದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಹಸುಗಳನ್ನ ಹಿಡಿದುಕೊಂಡು ಪ್ರತಿಭಟನೆ ನಡೆಸಲಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ, ಸೇರಿದಂತೆ ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಮಹಿಳಾ ಕಾರ್ಯಕರ್ತರು ಭಾಗಿಯಾಗಿದ್ದರು.