ಮೈಸೂರು ನಗರ

ಮೈಸೂರು| ಸೋನಿಯಾ ಹಾಗೂ ರಾಹುಲ್‌ ಗಾಂಧಿ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ನ್ಯಾಷನಲ್‌ ಹೆರಾಲ್ಡ್‌ ಹಗರಣ ಸಂಬಂಧ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನ್ಯಾಷನಲ್‌ ಹೆರಾಲ್ಡ್‌ ಹಗರಣ ಸಂಬಂಧ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಇಬ್ಬರ ಬಂಧನಕ್ಕೆ ಬಿಜೆಪಿ ಪದೇ ಪದೇ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು, ಕಾಂಗ್ರೆಸ್‌ ಪಕ್ಷದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿ ಮುಳುಗಿದೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಆದ್ದರಿಂದ ಅವರಿಬ್ಬರನ್ನು ಈಗಲೇ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಪ್ರಕರಣ ಸಂಬಂಧ ಆದಷ್ಟು ಬೇಗ ಇಬ್ಬರ ಬಂಧನವಾಗಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

3 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

3 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

3 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

12 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago