Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು| ಹುಬ್ಬಳ್ಳಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಇಂದು ಶಾಸಕ ಶ್ರೀವತ್ಸ ಅವರ ನೇತೃತ್ವದಲ್ಲಿ ಮಹಿಳಾ ಘಟಕ ಸೇರಿದಂತೆ ಹಲವಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ ಮಾತನಾಡಿ, ರಾಜ್ಯದಲ್ಲಿ ಆಡಳಿತದಲ್ಲಿ ವೈಫಲ್ಯ ಎದ್ದು ಕಾಣುತ್ತಿದ್ದು, ಮಹಿಳೆಯರಿಗೆ ರಕ್ಷಣೆ ಸಿಗದಂತಾಗಿದೆ. ಹಗಲಲ್ಲೇ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದಾರೆ. ಇದೊಂದು ಅಮಾನವೀಯ ಘಟನೆಯಾಗಿದ್ದು, ಈ ಘಟನೆಯನ್ನು ನಾವೆಲ್ಲಾ ತೀವ್ರವಾಗಿ ವಿರೋಧಿಸುತ್ತೇವೆ. ರಾಜ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

 

Tags:
error: Content is protected !!