ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮಹಾಕುಂಭಮೇಳವನ್ನು ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಅಯೋಗ್ಯರು. ಕುಂಭಮೇಳಕ್ಕೆ ಕೋಟ್ಯಾಂತರ ಜನರು ಹೋಗುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಹಿಂದೂ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು. ಇನ್ನು ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಿಗೆ ಶಾಂತಿ ಸಿಗಲಿ ಎಂದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲಾ ಹಂತಗಳಲ್ಲೂ ಚುನಾವಣೆ ನಡೆಯುತ್ತಿದೆ. ರಾಜ್ಯಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಸಾಗಿದೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕ ನನ್ನ ತೀರ್ಮಾನ ಅಲ್ಲ. ಬಿಜೆಪಿ ಸಂಘಟನೆ ಪರ್ವ 4-5 ತಿಂಗಳಿನಿದ ನಡೆದಿದೆ. ನಾನು ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲು ಆಗಲ್ಲ. ಸಂಸದ ಡಾ.ಕೆ.ಸುಧಾಕರ್‌ಗೆ ಮಾಹಿತಿ ಹಾಗೂ ಅನುಭವದ ಕೊರತೆ ಇದೆ. ಬಿಎಸ್‌ವೈ ಮಗನಾಗಿ ಅನೇಕ ಏಳು ಬೀಳುಗಳನ್ನು ನೋಡಿದ್ದೇನೆ. ಯಡಿಯೂರಪ್ಪ ಅವರ ಮಗನಾಗಿರಲು ನನಗೆ ತುಂಬಾ ಹೆಮ್ಮೆಯಿದೆ. ಸಮಯದ ಅಭಾವದಿಂದ ನಾನು ಸುಧಾಕರ್ ಅವರನ್ನು ಭೇಟಿ ಆಗಿರಲಿಲ್ಲ. ಆದರೆ ಚುನಾವಣೆ ಪ್ರಕ್ರಿಯೆ ನಡೆದ ಬಳಿಕ ಸುಧಾಕರ್‌ರನ್ನು ಭೇಟಿಯಾಗಿ, ಅವರ ಸಲಹೆ ಸ್ವೀಕರಿಸುತ್ತೇನೆ ಎಂದರು.
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…