Mysore
26
overcast clouds

Social Media

ಶನಿವಾರ, 02 ಮೇ 2026
Light
Dark

ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ವಿರುದ್ಧ ಬಿಜೆಪಿ ಯುವಮೋರ್ಚಾ ಪ್ರತಿಭಟನೆ

mysuru drug protest

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ಖಂಡಿಸಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ ನಡೆದಿದ್ದು, ಕಾಂಗ್ರೆಸ್ ಸರ್ಕಾರ ಡ್ರಗ್ಸ್ ಮಾಫಿಯಾ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನಾಕಾರರು, ಡ್ರಗ್ಸ್ ಮಾಫಿಯಾಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ತಲೆ ತಗ್ಗಿಸುವ ಕೆಲಸ ನಡೆಯುತ್ತಿದೆ.

ಕಾಂಗ್ರೆಸ್ ಸರ್ಕಾರ ಡ್ರಗ್ಸ್ ಮಾಫಿಯಾ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಡ್ರಗ್ಸ್ ಮಾಫಿಯಾಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Tags:
error: Content is protected !!