mysuru drug protest
ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ಖಂಡಿಸಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ ನಡೆದಿದ್ದು, ಕಾಂಗ್ರೆಸ್ ಸರ್ಕಾರ ಡ್ರಗ್ಸ್ ಮಾಫಿಯಾ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನಾಕಾರರು, ಡ್ರಗ್ಸ್ ಮಾಫಿಯಾಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ತಲೆ ತಗ್ಗಿಸುವ ಕೆಲಸ ನಡೆಯುತ್ತಿದೆ.
ಕಾಂಗ್ರೆಸ್ ಸರ್ಕಾರ ಡ್ರಗ್ಸ್ ಮಾಫಿಯಾ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಡ್ರಗ್ಸ್ ಮಾಫಿಯಾಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…