Mysore
17
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಗುರುಪೂರ್ಣಿಮೆ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ

ಮೈಸೂರು: ಗುರುಪೂರ್ಣಿಮೆಯ ಅಂಗವಾಗಿ ಮೈಸೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.

ಮೈಸೂರಿನ ಟಿ.ಕೆ.ಲೇಔಟ್‌ನಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ಆಯೋಜಿಸಿದ್ದ ಶಿಬಿರಕ್ಕೆ ಹಿರಿಯ ವಕೀಲ ಕೆ.ಆರ್.ಶಿವಶಂಕರ್‌ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಗುರು-ಶಿಷ್ಯರ ಸಂಬಂಧ ಅನಾದಿ ಕಾಲದಿಂದಲೂ ಇದೆ. ಜ್ಞಾನದ ಭಂಡಾರವಾಗಿರುವ ಗುರುವಿನ ಬಳಿ ಕಲಿತ ವಿದ್ಯೆ ಅತ್ಯಂತ ಶ್ರೇಷ್ಠ.

ಬೆಳಕು ಹರಿಸಿ ವ್ಯಕ್ತಿಯನ್ನು ಸುಜ್ಞಾನದ ಕಡೆ ಕೊಂಡೊಯ್ಯುವ ಮಹಾನ್‌ ದೈವಿಯೇ ಗುರು. ಸನಾತನ ಧರ್ಮ ಸಂಸ್ಕೃತಿಯಲ್ಲಿ ತಂದೆ-ತಾಯಿ ನಂತರದ ಸ್ಥಾನವನ್ನು ಗುರುವಿಗೆ ನೀಡಲಾಗಿದೆ. ಗುರುಗಳು ಪರಮಾತ್ಮನ ಅವತಾರ ರೂಪವಾಗಿದ್ದಾರೆ ಎಂದು ಗುರುಗಳ ಮಹತ್ವವನ್ನು ಸಾರಿ ಸಾರಿ ಹೇಳಿದರು.

ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಜನರು ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಸದ್ಬಳಕೆ ಮಾಡಿಕೊಂಡರು. 30 ಜನ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

ಇದೇ ಸಂದರ್ಭದಲ್ಲಿ ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್‌, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ್‌ ಅಯ್ಯಂಗಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags:
error: Content is protected !!