ಮೈಸೂರು: ಗುರುಪೂರ್ಣಿಮೆಯ ಅಂಗವಾಗಿ ಮೈಸೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಮೈಸೂರಿನ ಟಿ.ಕೆ.ಲೇಔಟ್‌ನಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ಆಯೋಜಿಸಿದ್ದ ಶಿಬಿರಕ್ಕೆ ಹಿರಿಯ ವಕೀಲ ಕೆ.ಆರ್.ಶಿವಶಂಕರ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಗುರು-ಶಿಷ್ಯರ ಸಂಬಂಧ ಅನಾದಿ ಕಾಲದಿಂದಲೂ ಇದೆ. ಜ್ಞಾನದ ಭಂಡಾರವಾಗಿರುವ ಗುರುವಿನ ಬಳಿ ಕಲಿತ ವಿದ್ಯೆ ಅತ್ಯಂತ ಶ್ರೇಷ್ಠ.
ಬೆಳಕು ಹರಿಸಿ ವ್ಯಕ್ತಿಯನ್ನು ಸುಜ್ಞಾನದ ಕಡೆ ಕೊಂಡೊಯ್ಯುವ ಮಹಾನ್ ದೈವಿಯೇ ಗುರು. ಸನಾತನ ಧರ್ಮ ಸಂಸ್ಕೃತಿಯಲ್ಲಿ ತಂದೆ-ತಾಯಿ ನಂತರದ ಸ್ಥಾನವನ್ನು ಗುರುವಿಗೆ ನೀಡಲಾಗಿದೆ. ಗುರುಗಳು ಪರಮಾತ್ಮನ ಅವತಾರ ರೂಪವಾಗಿದ್ದಾರೆ ಎಂದು ಗುರುಗಳ ಮಹತ್ವವನ್ನು ಸಾರಿ ಸಾರಿ ಹೇಳಿದರು.
ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಜನರು ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಸದ್ಬಳಕೆ ಮಾಡಿಕೊಂಡರು. 30 ಜನ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.
ಇದೇ ಸಂದರ್ಭದಲ್ಲಿ ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ್ ಅಯ್ಯಂಗಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…