ಮೈಸೂರು ನಗರ

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ ಅಂತ್ಯವಾಗಲಿದೆ.

ಸುಮಾರು 25 ನಿಮಿಷಗಳ ಕಾಲ ಈ ಮನಮೋಹಕ ಬ್ಲಡ್‌ ಮೂನ್‌ ದೃಶ್ಯ ಗೋಚರಿಸಲಿದೆ ಎಂದು ಹೇಳಲಾಗಿದ್ದು, ನಮ್ಮ ರಾಜ್ಯದಲ್ಲೂ ಸಹ ಗ್ರಹಣದ ಪ್ರಭಾವ ಇರಲಿದೆ. ಹಾಗಾಗಿ ಇಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ಗ್ರಹಣದ ಪ್ರಯುಕ್ತ ವಿಶೇಷ ಪೂಜೆಗಳು ನಡೆಯಲಿವೆ.

ಇಂದು ಮಧ್ಯಾಹ್ನ 3.27ಕ್ಕೆ ರಕ್ತಚಂದ್ರಗ್ರಹಣ ಆರಂಭವಾಗಿ ಸಂಜೆ 6.46ಕ್ಕೆ ಮೋಕ್ಷಗೊಳ್ಳಲಿದೆ. ಈ ಸಮಯದಲ್ಲಿ ರಾಜ್ಯದ ಕೆಲ ದೇವಾಲಯಗಳು ಬಂದ್‌ ಆಗಲಿವೆ. ಗ್ರಹಣದ ಕಾರಣದಿಂದ ಬೆಂಗಳೂರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಇಂದು ಮಧ್ಯಾಹ್ನ 3 ರಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ತಲಕಾವೇರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಬಂದ್‌ ಆಗಿದ್ದು, ಸಂಜೆ 7.15ಕ್ಕೆ ದೇವಾಲಯ ತೆರೆಯಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

7 mins ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

15 mins ago

ಮಾರ್ಚ್.‌10ರಂದು ಡಿಕೆಶಿ ಡಿನ್ನರ್‌ ಪಾರ್ಟಿ: ಸಿದ್ದರಾಮಯ್ಯಗೂ ಆಹ್ವಾನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.10ರಂದು ಡಿನ್ನರ್‌ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌6ರಂದು ಡಿ.ಕೆ.ಶಿವಕುಮಾರ್‌ ಕೆಪಿಸಿಸಿ…

52 mins ago

ಫೋನ್‌ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್‌ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು…

55 mins ago

ಖಮೇನಿ ಹತ್ಯೆ ವಿರೋಧಿಸಿ ಪ್ರತಿಭಟನೆ: ಕಾಶ್ಮೀರದಲ್ಲಿ ಕಠಿಣ ನಿರ್ಬಂಧ

ಶ್ರೀನಗರ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್ ಪ್ರತಿಭಟನೆಗಳ ನಂತರ ಕಾಶ್ಮೀರದಲ್ಲಿ…

59 mins ago

ಖಮೇನಿ ಹತ್ಯೆ ಬಳಿಕ ಕೇಂದ್ರ ಸರ್ಕಾರ ಮೌನವಹಿಸಿದೆ: ಸೋನಿಯಾ ಗಾಂಧಿ ಆಕ್ರೋಶ

ನವದೆಹಲಿ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಕೇಂದ್ರ ಸರ್ಕಾರ ಮೌನವಾಗಿರುವುದಕ್ಕೆ ಕಾಂಗ್ರೆಸ್ ಸಂಸದೀಯ…

1 hour ago