ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ ಅಂತ್ಯವಾಗಲಿದೆ.
ಸುಮಾರು 25 ನಿಮಿಷಗಳ ಕಾಲ ಈ ಮನಮೋಹಕ ಬ್ಲಡ್ ಮೂನ್ ದೃಶ್ಯ ಗೋಚರಿಸಲಿದೆ ಎಂದು ಹೇಳಲಾಗಿದ್ದು, ನಮ್ಮ ರಾಜ್ಯದಲ್ಲೂ ಸಹ ಗ್ರಹಣದ ಪ್ರಭಾವ ಇರಲಿದೆ. ಹಾಗಾಗಿ ಇಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ಗ್ರಹಣದ ಪ್ರಯುಕ್ತ ವಿಶೇಷ ಪೂಜೆಗಳು ನಡೆಯಲಿವೆ.
ಇಂದು ಮಧ್ಯಾಹ್ನ 3.27ಕ್ಕೆ ರಕ್ತಚಂದ್ರಗ್ರಹಣ ಆರಂಭವಾಗಿ ಸಂಜೆ 6.46ಕ್ಕೆ ಮೋಕ್ಷಗೊಳ್ಳಲಿದೆ. ಈ ಸಮಯದಲ್ಲಿ ರಾಜ್ಯದ ಕೆಲ ದೇವಾಲಯಗಳು ಬಂದ್ ಆಗಲಿವೆ. ಗ್ರಹಣದ ಕಾರಣದಿಂದ ಬೆಂಗಳೂರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಇಂದು ಮಧ್ಯಾಹ್ನ 3 ರಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ತಲಕಾವೇರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಬಂದ್ ಆಗಿದ್ದು, ಸಂಜೆ 7.15ಕ್ಕೆ ದೇವಾಲಯ ತೆರೆಯಲಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…