ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ? ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದರು.
ಇದನ್ನು ಓದಿ: ಕಾರು ಬಾಂಬ್ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ
ಪತ್ರಕರ್ತರ ಈ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್‌ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು. ಬಾಂಬ್ ಬ್ಲಾಸ್ಟ್‌ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ ಎಂದರು.
ಇನ್ನು ಭಾರತವನ್ನು ಒಂದು ಧರ್ಮದ ದೇಶ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಭಾರತ ಸಂವಿಧಾನಬದ್ಧ ಬಹುತ್ವದ ದೇಶ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕರಾದ ಕಪಿಲ್ ಸಿಬಲ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ನವೆಂಬರ್.15ರಂದು ದೆಹಲಿಗೆ ಹೋಗುತ್ತಿದ್ದೇನೆ. ಅವತ್ತೇ ವಾಪಸ್ ಬರುವ ಅಂದಾಜಿದೆ. ಹೈಕಮಾಂಡ್ ಸಮಯ ಕೊಟ್ಟರೆ ಭೇಟಿ ಆಗ್ತೀನಿ ಅಷ್ಟೆ. ಇನ್ನೂ ಹೈಕಮಾಂಡ್ ಸಮಯ ಕೇಳಿಲ್ಲ ಎಂದು ಹೇಳಿದರು.





