ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಪೊಲೀಸರ ತಪಾಸಣೆಯ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ.
ಭಾನುವಾರ ಬೆಳಿಗ್ಗೆ ನಗರದ ನಜರಬಾದ್‌ನಲ್ಲಿರುವ ಹೋಟೆಲ್ ಜೆಪಿ ಫಾರ್ಚೂನ್ ಹಾಗೂ ಜೆಎಲ್‌ಬಿ ರಸ್ತೆಯಲ್ಲಿರುವ ಮೆಟ್ರೋಪೋಲ್ ಹೋಟೆಲ್ ಗುರಿಯಾಗಿಸಿ ಬೆದರಿಕೆ ಇ-ಮೇಲ್ ಬಂದಿದೆ. ಸಂದೇಶದಲ್ಲಿ ತಮಿಳುನಾಡಿನಲ್ಲಿರುವ ನನ್ನ ಕುಟುಂಬಕ್ಕೆ ಅನ್ಯಾಯವಾಗಿದ್ದು, ಅದರ ಸೇಡನ್ನು ತೀರಿಸಿಕೊಳ್ಳಲು ಈ ಕೃತ್ಯಕ್ಕೆ ಮುಂದಾಗಿದ್ದೇನೆ ಎಂದು ಉಲ್ಲೇಖಿಸಿದ್ದಾನೆ.
ತಮಿಳುನಾಡಿನ ಅನಂತಮ್ ಅರಿಯಪ್ಪನ್ ಎಂಬ ಹೆಸರಿನಲ್ಲಿ ಈ ಇ-ಮೇಲ್ ಬಂದಿದೆ. ಎರಡೂ ಹೋಟೆಲ್‌ಗಳಲ್ಲಿ ಬಾಂಬ್ ಸ್ಛೋಟ ನಡೆಸುವುದಾಗಿ ಆತ ಎಚ್ಚರಿಕೆ ನೀಡಿದ್ದನು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೊದಲಿಗೆ ಹೋಟೆಲ್‌ಗಳ ಹೊರ ಆವರಣದಲ್ಲಿ ಶ್ವಾನದಳದ ಮೂಲಕ ತಪಾಸಣೆ ನಡೆಸಲಾಯಿತು. ನಂತರ ಹೋಟೆಲ್‌ನಲ್ಲಿ ಇದ್ದ ಅತಿಥಿಗಳನ್ನು ಹೊರಗೆ ಕಳುಹಿಸಿ ಒಳ ಆವರಣದಲ್ಲಿ ಸಂಪೂರ್ಣ ತಪಾಸಣೆ ನಡೆಸಲಾಯಿತು.
ಮುನ್ನೆಚ್ಚರಿಕೆ ಕ್ರಮವಾಗಿ ಹೋಟೆಲ್‌ಗಳ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಇ-ಮೇಲ್‌ನ ಮೂಲ ಪತ್ತೆ ಹಚ್ಚಲು ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದು, ಇದು ನಿಜವಾದ ಬೆದರಿಕೆಯೋ ಅಥವಾ ಕಿಡಿಗೇಡಿಗಳ ಕೃತ್ಯವೋ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಸದ್ಯ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…